ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದಿದೆ.
ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಪೆಟ್ಟು ಬಿದ್ದಿದ್ದು, ಚಾಲಕನಿಗೂ ಗಾಯಗಳಾಗಿವೆ.
ಕಾರು ಪಲ್ಟಿಯಾದ ತಕ್ಷಣ ಸುರೇಶ್ ಗೌಡ ಅವರ ಗನ್‌ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುರೇಶ್ ಗೌಡರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಬ್ಬರನ್ನೂ ಮೊದಲು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…