Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ಬಾಂಬ್‌ ಸಿಡಿಸಿದ ಶಿವರಾಮೇಗೌಡ

ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್‌ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ.

ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು ನರಬಲಿ ಪಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಯೋಗೇಶ್ವರ್‌ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್‌ರನ್ನು ಅಭ್ಯರ್ಥಿ ಮಾಡಲು ಅಪಾರ ಶ್ರಮ ವಹಿಸಿದ್ದರು. ಆದರೆ ಎಚ್‌ಡಿಡಿ ಕುಟುಂಬ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಅವರನ್ನೇ ಬಲಿ ಪಡೆದಿದೆ. ಚನ್ನಪಟ್ಟಣ ಜನ ದಡ್ಡರಲ್ಲ, ಅಲ್ಲಿ ಯೋಗೇಶ್ವರ್‌ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್‌ ಅಲ್ಲ, ಕುಮಾರಸ್ವಾಮಿ ನಿಂತರೂ ಏನು ಮಾಡಕ್ಕಾಗಲ್ಲ. ಯೋಗೇಶ್ವರ್‌ ಆಚೆ ಕಳುಹಿಸಲು ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾರಣ ಎಂದು ಗಂಭೀರ ಆರೋಪ ಮಾಡಿದರು.

Tags: