ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ.
ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು ನರಬಲಿ ಪಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಯೋಗೇಶ್ವರ್ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್‌ರನ್ನು ಅಭ್ಯರ್ಥಿ ಮಾಡಲು ಅಪಾರ ಶ್ರಮ ವಹಿಸಿದ್ದರು. ಆದರೆ ಎಚ್‌ಡಿಡಿ ಕುಟುಂಬ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನೇ ಬಲಿ ಪಡೆದಿದೆ. ಚನ್ನಪಟ್ಟಣ ಜನ ದಡ್ಡರಲ್ಲ, ಅಲ್ಲಿ ಯೋಗೇಶ್ವರ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಅಲ್ಲ, ಕುಮಾರಸ್ವಾಮಿ ನಿಂತರೂ ಏನು ಮಾಡಕ್ಕಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…