Mysore
20
mist

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಸುಮಲತಾ ಅಂಬರೀಷ್‌ ವಿರೋಧ

Sumalatha

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ಜಲಾಶಯದ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಟನೆಗಳು ವಿರೋಧಿಸಿದೆ. ಆದರೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ. ಇದು ಕೇವಲ ಒಂದು ಅಣೆಕಟ್ಟೆಯಲ್ಲ. ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!