ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಇತ್ತ ಮಂಡ್ಯದ ಮಗ ಎಂದೇ ಖ್ಯಾತಿಯಾಗಿರುವ ದರ್ಶನ್ ವಿರುದ್ಧ ಮಂಡ್ಯದ ರೈತರೆಲ್ಲರೂ ಮುಗಿಬಿದ್ದಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆಯವರೆಗೆ ಕರ್ನಾಟಕ ರಾಜ್ಯ ರೈತ ಸಂಘ ರ್ಯಾಲಿ ನಡೆಸಿ ನಟ ದರ್ಶನ್‌ಗೆ ಶಿಕ್ಷೆ ಆಗುವಂತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ 420, ಕೊಲೆಗಡುಕ ದರ್ಶನ್‌ಗೆ ಗಲ್ಲು ಶಿಕ್ಷೆಯಾಗುವ ವರೆಗೂ ಹೋರಾಟ ಮಾಡಲಾಗುವುದು ಎಂದು ಬ್ಯಾನರ್, ನಾಮ ಫಲಕಗಳನ್ನು ಹಿಡಿದು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಪ್ರತಿಭಟನೆ ನಡೆಸಿದರು.
ಇತ್ತ ಚನ್ನಪಟ್ಟಣದಲ್ಲಿಯೂ ಸಹಾ ಡಾ. ರಾಜ್‌ಕುಮಾರ್ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಯಿತು. ದರ್ಶನ್ ಸೇರಿದಂತೆ ಇತರೆ ಕನ್ನಡ ನಾಯಕ ನಟರು ಡಾ. ರಾಜ್‌ಕುಮಾರ್ ಆದರ್ಶ ಪಾಲಿಸಬೇಕು. ಕೇವಲ ಹಣಕ್ಕಾಗಿ ಕಲಾವಿದರಾಗುವುದು ಬೇಡ. ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…