Mysore
27
scattered clouds

Social Media

ಬುಧವಾರ, 25 ಮಾರ್ಚ್ 2026
Light
Dark

ಉದ್ಘಾಟನೆಗೊಂಡ ನಾಲ್ಕೇ ದಿನಕ್ಕೆ ಕೆಟ್ಟುನಿಂತ ಎಕ್ಸ್‌ಪ್ರೆಸ್‌ವೇ ಸ್ಪೀಡ್ ಡಿಟೆಕ್ಟರ್

ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ.

ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್‌ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸ್ಪೀಡ್ ಡಿಟೆಕ್ಟರ್ ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಈ ಕ್ಯಾಮೆರಾಗಳು ನಾಲ್ಕೇ ದಿನಕ್ಕೆ ಹಾಳಾಗಿವೆ.

ಜುಲೈ 29 ರಿಂದ ಎಐ ಕ್ಯಾಮೆರಾಗಳ ಜೊತೆ ಸ್ಪೀಡ್ ಡಿಟೆಕ್ಟರ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಈ ಡಿಟೆಕ್ಟರ್‌ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಯೋಜನೆಗೆ ಲಕ್ಷಾಂತರ ರೂ.ಗಳನ್ನು ವಿನಿಯೋಗಿಸಲಾಗಿದೆ.

ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿತ್ತು. ವೇಗದ ಮಿತಿ ಮೀರಿದರೆ ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುವಂತೆ ತಂತ್ರಜ್ಞಾನ ರೂಪಿಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!