ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ.
ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸ್ಪೀಡ್ ಡಿಟೆಕ್ಟರ್ ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಈ ಕ್ಯಾಮೆರಾಗಳು ನಾಲ್ಕೇ ದಿನಕ್ಕೆ ಹಾಳಾಗಿವೆ.
ಜುಲೈ 29 ರಿಂದ ಎಐ ಕ್ಯಾಮೆರಾಗಳ ಜೊತೆ ಸ್ಪೀಡ್ ಡಿಟೆಕ್ಟರ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಈ ಡಿಟೆಕ್ಟರ್‌ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಯೋಜನೆಗೆ ಲಕ್ಷಾಂತರ ರೂ.ಗಳನ್ನು ವಿನಿಯೋಗಿಸಲಾಗಿದೆ.
ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿತ್ತು. ವೇಗದ ಮಿತಿ ಮೀರಿದರೆ ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುವಂತೆ ತಂತ್ರಜ್ಞಾನ ರೂಪಿಸಲಾಗಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…