ಮಂಡ್ಯ

ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.

ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.

ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ

ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.

ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್‌, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

8 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

12 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

37 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

46 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

1 hour ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

1 hour ago