shriranga pattan dasara
ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.
ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.
ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ
ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.
ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…