Mysore
15
few clouds

Social Media

ಬುಧವಾರ, 21 ಜನವರಿ 2026
Light
Dark

ನಾಳೆಯಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

krs

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ.

ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.

ಇದನ್ನೂ ಓದಿ:-ಸಮೀಕ್ಷೆ ಕಾರ್ಯದಿಂದ ವ್ಯತ್ಯಯವಾಗದು ವಿದ್ಯುತ್ ಬಿಲ್ : ಬೆಸ್ಕಾಂ ಸ್ಪಷ್ಟನೆ

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಬಹುದಾಗಿದೆ. ಹೀಗಾಗಿ ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ವಿತರಣೆ

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.

ಸೆಪ್ಟೆಂಬರ್ 26ರ ಶುಕ್ರವಾರ ಸಾಯಂಕಾಲ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

Tags:
error: Content is protected !!