ಮಂಡ್ಯ

ತುಂಬಿದ ಕಬಿನಿ: ನಾಲೆಗಳಿಗೆ ನೀರು ಹರಿಸಲು ಆದೇಶ

ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ.

ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.

ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago