ಮಂಡ್ಯ

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಪಡಿಸಲಾಗಿದೆ. ಇದಕ್ಕೆ ತಾಂತ್ರಿಕ ಅನುಮೋದನೆ ದೊರೆತಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯಲಾಗುವುದು. ಅನುಮೋದನೆ ನಂತರ ಶೀಘ್ರದಲ್ಲಿಯೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರದ ವಿ.ನಾಲೆ ವ್ಯಾಪ್ತಿಯ ಪಿಕಪ್, ಸಂಪರ್ಕ, ಶಾಖಾ ನಾಲೆಗಳ ಅಭಿವೃದ್ಧಿಗೆ ಜಲಸಂಪನ್ಮೂಲ ಇಲಾಖೆಯಿಂದ 100 ಕೋಟಿ ರೂ. ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಅಲ್ಲಿಗೂ ಶೀಘ್ರದಲ್ಲಿಯೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು. ರೈತರ ಬೆಳೆಗಳಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಹಣ ಬಿಡಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕಾರ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ 200 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಶೇ.80ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಈ ಪೈಕಿ ಇನ್ನೂ 40 ಕೋಟಿ ರೂ. ಕಾಮಗಾರಿಗಳನ್ನು ಆರಂಭಿಸಬೇಕಿದೆ.

ಮಂಡ್ಯ ನಗರಕ್ಕೆ ಹೊಸ ರೂಪ ಕೊಡಲು ಮುಂದಾಗಿದ್ದು, ಡೆಲ್ಟಾ ಮೂಲಕ ಮಹಾನಗರ ಪಾಲಿಕೆ ಮಾದರಿಯಲ್ಲಿ ಬೆಸಗರಹಳ್ಳಿ ರಾಮಣ್ಣ ವೃತ್ತದಿಂದ ಗೌರಿಶಂಕರ ಕಲ್ಯಾಣ ಮಂಪಟದವರೆಗೆ ಉತ್ತಮ ರಸ್ತೆ, ಫುಟ್‌ಪಾತ್, ಸೈಕಲ್ ವೇ ನಿರ್ಮಿಸಲಾಗುವುದು. ಜೊತೆಗೆ ಬನ್ನೂರು ರಸ್ತೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು ಎಂದರು.

ಗೊಂದಲದಿಂದ ಹೊರಬನ್ನಿ:
ಕೈಗಾರಿಕೆ ಸ್ಥಾಪನೆಗೆ ಬಜೆಟ್‌ನಲ್ಲಿ 100 ಎಕರೆ ಜಮೀನು ನೀಡುವುದಾಗಿ ಘೋಷಿಸಲಾಗಿದೆ. ಜಿಲ್ಲೆಯ ನಾಲ್ಕು ಕಡೆ ಜಾಗ ಗುರುತಿಸಿದ್ದು, ತಜ್ಞರು ಪರಿಶೀಲನೆ ನಡೆಸಿ ಯಾವ ಜಾಗ ಆಯ್ಕೆ ಮಾಡುತ್ತಾರೋ ಅದನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರವಿಕುಮಾರ್ ತಿಳಿಸಿದರು. ಕುಮಾರಸ್ವಾಮಿ ಅವರು ಇನ್ನೂ ಗೊಂದಲದಲ್ಲೇ ಇದ್ದಾರೆ. ಬಿಡದಿ ಬಳಿ ರೈತರ ಜಮೀನು ಕೊಡಬೇಡಿ ಎನ್ನುತ್ತಾರೆ. ಇಲ್ಲಿ ಜಮೀನು ಕೊಡಿ ಎನ್ನುತ್ತಾರೆ. ಅವರಲ್ಲಿ ಸ್ಪಷ್ಟತೆ ಇಲ್ಲ. ತಜ್ಞರು ಗುರುತಿಸುವ ಜಾಗವನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕಾಂಗ್ರೆಸ್ ಮುಖಂಡ ತ್ಯಾಗರಾಜು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

39 mins ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

43 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

47 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

53 mins ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

57 mins ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

1 hour ago