ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಟನ್ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಮಂಡ್ಯದಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು ಎಂಬಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಒಂದು ವೇಳೆ ರಾಜ್ಯ ಸರ್ಕಾರದ ಅಕ್ರಮದ ವಿರುದ್ಧ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಇನ್ನೂ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣವನ್ನು ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆಯೇ ಅವರು ಹನಿಟ್ರ್ಯಾಪ್ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ ಎಂಉದು ತಿಳಿದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಆನ್‌ಲೈನ್ ಬೆಟ್ಟಿಂಗ್ ತಡೆ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಟ್ಟಿಂಗ್ ನಡೆಸುವವರನ್ನೂ ನಾವು ಕರೆದು ಸಭೆ ನಡೆಸಿದ್ದು, ಕಾನೂನು ವ್ಯಾಪ್ತಿಯಲ್ಲಿ ಇರುವಂತೆ ಹೇಳಿದ್ದೇವೆ. ಅದಕ್ಕೆ ಅವರು ಕೂಡ ಒಪ್ಪಿದ್ದಾರೆ. ಅಲ್ಲದೇ ಮುಂದಿನ ಒಂದು ತಿಂಗಳೊಳಗಾಗಿ ನಾವು ಹೊಸ ಕಾನೂನು ತರುತ್ತೇವೆ ಎಂದು ಹೇಳಿದರು.





