ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಗಡ್ಡಪ್ಪ ಅವರಿಗೆ ತಿಂಗಳ ಹಿಂದೆ ಕೆಳಗೆ ಬಿದ್ದ ಸೊಂಟ ಪೆಟ್ಟಾಗಿ ಆಪರೇಷನ್ ಆಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಗಡ್ಡಪ್ಪ ಎಂದೇ ಖ್ಯಾತಿ ಪಡೆದಿದ್ದ ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು, ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮೇಕಪ್ ಇಲ್ಲದೇ ಸಾಮಾನ್ಯವಾಗಿ ನಟಿಸಿದ್ದ ಅವರ ನಟನೆ ಜನರಿಗೆ ಬಹಳ ಇಷ್ಟವಾಗಿತ್ತು. ಈ ಸಿನಿಮಾಗೆ ಅಂತರಾಷ್ಟ್ರೀಯ ಪ್ರಶಸ್ತಿ ಕೂಡ ಬಂದಿತ್ತು.





