Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಧುಮ್ಮಿಕ್ಕುತ್ತಿದೆ ಗಗನಚುಕ್ಕಿ ಜಲಪಾತ

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಹೌದು.. ದಶಕಗಳ ಬಳಿಕ ಅವಧಿಗೂ ಮೊದಲೆ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ರೆ, ಶಿವನ ಸಮುದ್ರದ ಗಗನಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಮೈಬೀಸಿ ಕರೆಯುತ್ತಿದೆ.

ಇನ್ನು ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್‌ಎಸ್‌ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ. ಈ ದೃಶ್ಯದ ವೈಭವ ನೋಡುಗರನ್ನು ರೋಮಾಂಚನಗೊಳಿಸುವ ಜತೆಗೆ ಮನಸ್ಸಿಗೆ ಮುದ ನೀಡುತ್ತದೆ.

ಸದ್ಯ ಪ್ರವಾಸಿಗರು ಕೂಡ ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಗಗನಚುಕ್ಕಿ ಜಲಪಾತದ ಕಡೆ ಮುಖ ಮಾಡಿದ್ದಾರೆ. ಒಂದು ವೇಳೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಾಗಲಿದೆ.

Tags:
error: Content is protected !!