ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಹೌದು.. ದಶಕಗಳ ಬಳಿಕ ಅವಧಿಗೂ ಮೊದಲೆ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ರೆ, ಶಿವನ ಸಮುದ್ರದ ಗಗನಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಮೈಬೀಸಿ ಕರೆಯುತ್ತಿದೆ.
ಇನ್ನು ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್‌ಎಸ್ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ. ಈ ದೃಶ್ಯದ ವೈಭವ ನೋಡುಗರನ್ನು ರೋಮಾಂಚನಗೊಳಿಸುವ ಜತೆಗೆ ಮನಸ್ಸಿಗೆ ಮುದ ನೀಡುತ್ತದೆ.
ಸದ್ಯ ಪ್ರವಾಸಿಗರು ಕೂಡ ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಗಗನಚುಕ್ಕಿ ಜಲಪಾತದ ಕಡೆ ಮುಖ ಮಾಡಿದ್ದಾರೆ. ಒಂದು ವೇಳೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಾಗಲಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…