ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ಭರ್ತಿಯಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಗಗನಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜಲಪಾತದ ಸೊಗಸನ್ನು ಕಣ್ತುಂಬಿಕೊಳ್ಳಲು ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧೆಡೆಗಳಿಂದ ಪ್ರವಾಸಿಗರ ದಂಡೇ ಜಲಪಾತದತ್ತ ಹರಿದು ಬರುತ್ತಿದೆ.
ಎತ್ತರದಿಂದ ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತ ಹಾಗೂ ಕಲ್ಲುಬಂಡೆಗಳ ನಡುವೆ ಭೋರ್ಗರೆಯುವ ಕೊಳ್ಳೇಗಾಲದ ಭರಚುಕ್ಕಿ ಜಲಪಾತಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಎರಡೂ ಜಲಧಾರೆಗಳು ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಗಡಿಯಂಚಿನಲ್ಲೇ ಇವೆ.
ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಸಾಗಿ ಶಿವನಸಮುದ್ರ ತಲುಪುತ್ತಿದ್ದಂತೆಯೇ ಧುಮುಕಿ ಗಗನಚುಕ್ಕಿಯಾಗಿ, ಬಳಿಕ ಭರಚುಕ್ಕಿಯಾಗಿ ಹರಿಯುತ್ತದೆ. ಈ ದೃಶ್ಯ ನೋಡುಗರನ್ನು ರೋಮಾಂಚನಗೊಳಿಸುತ್ತದೆ.
ಶಿವನ ಸಮುದ್ರ ಕಾವೇರಿ ನದಿ ಸುಮಾರು 419 ಅಡಿ ಎತ್ತರದಿಂದ ಕಂದಕಕ್ಕೆ ಧುಮುಕುತ್ತದೆ. ಬಂಡೆಯ ಮೇಲಿಂದ ಭೋರ್ಗರೆಯುವ ಕಾವೇರಿಯ ಸೊಬಗನ್ನು ಹಿನ್ನೆಲೆಯಾಗಿರಿಸಿಕೊಂಡು ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…