Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಗಗನಚುಕ್ಕಿ ಜಲಪಾತೋತ್ಸವ : ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

gaganachukki flight festival

ಮಂಡ್ಯ : ಜಿಲ್ಲಾಧಿಕಾರಿ ಕುಮಾರ ಅವರು ಶನಿವಾರ ಸಂಜೆ ಗಗನ ಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ನಡೆಯುವ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಕಾರ್ಯಕ್ರಮದ ದಿನದಂದು ವಾಹನ ನಿಲುಗಡೆ ಪ್ರದೇಶದಲ್ಲಿ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಆಗಬೇಕು. ವಾಹನ ನಿಲುಗಡೆ ಸ್ಥಳದಲ್ಲಿ ಲೈಟಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಬ್ಯಾರಿ ಕ್ಯಾಡಿಂಗ್ ಆಗಬೇಕು. ಹೆಚ್ಚಿನ ಕೌಂಟರ್ ಗಳನ್ನು ತೆರೆಯಬೇಕು, ಶುಚಿ ಹಾಗೂ ರುಚಿಯಾದ ಆಹಾರದ ವ್ಯವಸ್ಥೆ ಆಗಬೇಕು ಎಂದು ಸೂಚನೆ ನೀಡಿದರು.

ವೇದಿಕೆ ಸಮಿತಿ ಅವರು ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ವಿತರಣೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು.

Tags:
error: Content is protected !!