ಮಂಡ್ಯ

ಸೆ.14, 15 ರಂದು ಗಗನಚುಕ್ಕಿ ಜಲಪಾತೋತ್ಸವ: ಪಿ.ಎಂ. ನರೇಂದ್ರಸ್ವಾಮಿ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ  ತಿಳಿಸಿದರು.

ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.  ಸೆಪ್ಟೆಂಬರ್ 14 ರಂದು  ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು.

ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದರು.

ಎರಡು ದಿನಗಳ ಕಾಲ ನಡೆಯುವ ಗಗನಚುಕ್ಕಿ ಜಲಪಾತೋತ್ಸವದ ಹಿನ್ನಲೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಊಟದ ವ್ಯವಸ್ಥೆ ಮಾಡಲಾಗಿದೆ. ಪರಿಸರದ ಸೌಂದರ್ಯ ಸವಿಯುವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಿಗ್ಗೆಯಿಂದ ರಾತ್ರಿಯವರೆಗೆ ಇರುತ್ತದೆ ಎಂದರು.

ಗಗನ ಚುಕ್ಕಿಯನ್ನು ಬೃಹತ್ ಆಕರ್ಷಣೀಯ ಕೇಂದ್ರವನ್ನಾಗಿಸಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಇಲ್ಲಿ ಸಿಗುವ ಸೌಲಭ್ಯದೊಂದಿಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ ಹಲವಾರು ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದರು.

ಏಷಿಯಾದಲ್ಲೇ ಮೊದಲು ಜಲ ವಿದ್ಯುತ್ ಉತ್ಪದಾನೆ ಮಾಡಿದ ಹೆಗ್ಗಳಿಕೆ ಶಿವನಸಮುದ್ರ ವಿದ್ಯುತ್ ಕೇಂದ್ರಕ್ಕೆ ಸಲ್ಲುತ್ತದೆ. ಮೈಸೂರು-ಮಂಡ್ಯ- ಚಾಮರಾಜನಗರ ಜಿಲ್ಲೆಗಳಲ್ಲಿ ಇರುವ ಪ್ರವಾಸಿ ಸ್ಥಳಗಳ ಪ್ರವಾಸಿ ಸರ್ಕೂಟ್ ರಚಿಸಬೇಕು. ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸಾಕು ಪ್ರಾಣಿಗಳ ಪ್ರಾಣಿ ಸಂಗ್ರಾಹಲಯ, ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಚಿಂತಿಸಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದ್ದು, ಬೆಳಗಿನ ಕಾರ್ಯಕ್ರಮವನ್ನು ಸ್ಥಳೀಯ ಕಲಾವಿದರಿಗೆ ನೀಡಲಾಗಿದೆ ಎಂದರು.

ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15 ರಂದು ಕಾರ್ಯಕ್ರಮ ನೀಡುತ್ತಿದ್ದಾರೆ ಎಂದ ಅವರು ಕಾರ್ಯಕ್ರಮದ ವಿವರ ನೀಡಿದರು.

ಸೆಪ್ಟೆಂಬರ್ 14 ರಂದು ಶನಿವಾರ
ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ.

ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ.

15 ರಂದು ಭಾನುವಾರ

ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,

ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ.

ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ.

6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಲೋಗೋವನ್ನು ಶಾಸಕರು ಅನಾವರಣಗಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

6 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

8 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

9 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

9 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

9 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

9 hours ago