ಮಂಡ್ಯ

ಗಾಂಧೀಜಿಯವರ ಕನಸು ಗ್ರಾಮ ಸ್ವರಾಜ್ಯ : ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ದೇಶ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿನ ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎಂಬುದು ಗಾಂಧೀಜಿಯವರ ಪರಿಕಲ್ಪನೆ ಆಗಿತ್ತು. ಗ್ರಾಮ ಸ್ವರಾಜ್ಯ ಎನ್ನುವಂತಹದ್ದು ಗಾಂಧೀಜಿಯವರ ಕನಸು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು.

ಅವರು ಇಂದು ರೈತ ಸಂಘ, ಪುಟ್ಟಣ್ಣಯ್ಯ ಟ್ರಸ್ಟ್ ವತಿಯಿಂದ ಪಾಂಡವಪುರ ಕ್ರೀಡಾಂಗಣದಲ್ಲಿ ನಡೆದ ಸ್ವರಾಜ್ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಶೇಕಡಾ 15 ರಷ್ಟು ಜನ ಐಟಿಬಿಟಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಶೇಕಡಾ 60 ರಿಂದ 70 ರಷ್ಟು ಜನ ಸಣ್ಣ ಕೈಗಾರಿಕೆಗೆ ಮತ್ತು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಸಣ್ಣ ಕೈಗಾರಿಗೆ ಹಾಗೂ ಕೃಷಿ ಕ್ಷೇತ್ರ ಹೆಚ್ಚಿನ ಅಭಿವೃದ್ಧಿ ಹೊಂದಬೇಕೆಂಬುದೇ ಸ್ವರಾಜ್ ಉತ್ಸವದ ಸದುದ್ದೇಶ ಎಂದರು.

ಗ್ರಾಮಗಳ ಸಮಸ್ಯೆ ಪರಿಹಾರವಾಗಬೇಕು ಹಾಗೂ ಅಭಿವೃದ್ಧಿ ಹೊಂದಬೇಕು ಎಂದು ವಿವಿಧ ಸಂಸ್ಥೆಗಳ ಸಹಕಾರದೊಂದಿದೆ ಪ್ರಮುಖ 12 ಮಳಿಗೆಗಳ ಪ್ರದರ್ಶನವನ್ನು ನಡೆಸಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಗ್ರಾಮ ಸಣ್ಣ ಕೈಗಾರಿಕೆ, ಕೃಷಿ ಹಾಗೂ ಕೈಗಾರಿಕೆಗಳ ಉತ್ಪನ್ನಗಳಿಗೆ ಅಗತ್ಯವಾದ ಉಪಉತ್ಪನ್ನಗಳನ್ನು ಗ್ರಾಮಗಳಲ್ಲಿಯೇ ಉತ್ಪಾದಿಸಬೇಕು. ಇತರರ ಮೇಲೆ ಅವಲಂಬಿತವಾಗದೆ ಗ್ರಾಮಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುವುದೇ ಸ್ವರಾಜ್ ಉತ್ಸವ. ಸ್ವರಾಜ್ ಉತ್ಸವದ ಪರಿಕಲ್ಪನೆಯನ್ನು ರೈತ ಸಂಘಗಳು ಒಗ್ಗೂಡಿ ರಾಜ್ಯದವರೆಗೆ ತಲುಪಿಸಬೇಕು ಎಂದು ರೈತರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಹಾಗೂ ಪಾಂಡವಪುರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೇಲುಕೋಟೆಯ ಪ್ರವಾಸೋದ್ಯಮ ಸಾಕ್ಷಾಚಿತ್ರ ಪ್ರದರ್ಶಿಸಲಾಯಿತು.

ಮಳಿಗೆಗಳು
ಕೃಷಿ, ಪ್ರವಾಸೋದ್ಯಮ, ಶಿಕ್ಷಣ, ಮಹಿಳಾ ಸಬಲೀಕರಣ, ಸಮಗ್ರ ಕೃಷಿ, ಆರೋಗ್ಯ, ಆಡಳಿತ, ಸಾಮಾಜಿಕ, ಪರಿಸರ, ತ್ಯಾಜ್ಯ, ಮೂಲಸೌಕರ್ಯ, ಹಾಗೂ ಉದ್ಯೋಗ ಎಂಬಂತೆ ಪ್ರಮುಖ 12 ವಿಷಯಗಳ ಕುರಿತು ವಿವಿಧ ಮಳಿಗೆಗಳನ್ನು ತೆರೆಯಲಾಗಿತ್ತು.

ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಪಾಂಡವಪುರ ನಗರದ ಫೈಲೇಟ್ ವೃತ್ತದಿಂದ ಪಾಂಡವಪುರ ಕ್ರೀಡಾಂಗಣದವರೆಗೆ ಡೊಳ್ಳು, ವೀರಾಗಸೆ, ಕಳಸ ಹಾಗೂ ಎತ್ತಿನಗಾಡಿ ಮೂಲಕ ಸ್ವರಾಜ್ ಉತ್ಸವದ ಮೆರವಣಿಗೆ ಜರುಗಿತು.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

26 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

44 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago