ಮಂಡ್ಯ

ಗೌರಿ ಗಣೇಶ ಹಬ್ಬ: ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ: ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ: ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮೀಲದ್‌ ಎರಡು ಹಬ್ಬಗಳು ಜೊತೆ ಜೊತೆಗೆ ಬಂದಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಗೊಂದಲಮಯ ವಾತಾವರಣ ಸೃಷ್ಟಿ ಮಾಡದಂತೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸೌಹರ್ದತೆ ಸಭೆ ನಡೆಸಿ ಅವರು ಮಾತನಾಡಿದರು.

ಅನುಮತಿ ಇಲ್ಲದ ಕಡೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಮೆರವಣಿಗೆ ಹೋಗುವ ರೂಟ್ ಮ್ಯಾಪ್ ನ್ನು ಪೊಲೀಸ್ ಇಲಾಖೆಗೆ ಒದಗಿಸಬೇಕು. ಕೆಲವು ವಿವಾದಾತ್ಮಕ ಸ್ಥಳಗಳಿರುತ್ತವೆ, ಆ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪಿಸುವ ಬದಲು ಬೇರೆ ಸ್ಥಳಗಳನ್ನು ಆಯ್ಕೆ ಮಾಡಿ ಎಂದರು.

ಮಂಟಪ ಹಾಕುವ ಸಮಯದಲ್ಲಿ ಸರಿಯಾದ ಜಾಗ ಆಯ್ಕೆ ಮಾಡಬೇಕು, ವಿಗ್ರಹವು 5 ಅಡಿಗಿಂತ ಹೆಚ್ಚಿದ್ದರೆ ಮೆರವಣಿಗೆ ಹೋಗುವ ಸಮಯದಲ್ಲಿ ಕರೆಂಟ್ ವೈರ್ ಗಳಿಗೆ ಮಾವಿನ ತೋರಣಗಳು ತಗುಲಿ ಕೆಲವೊಂದು ಕಡೆ ಅಹಿತಕರ ಘಟನೆಗಳು ಸಂಭವಿಸಬಹುದು. ಕತ್ತಲಲ್ಲಿ ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗುವ ಅವಘಡ ಸಂಭವಿಸಬಹುದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಿ ಎಂದರು.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.

ನೈಸರ್ಗಿಕವಾಗಿ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು ಅದರಂತೆ ಪರಿಸರ, ಜಲ ಮಾಲಿನ್ಯ ಮಾಡದೆ ಕಸವನ್ನು ವಾಹನದಲ್ಲಿ ಹಾಕಬೇಕು ಎಂದರು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾದಿತು ಎಂದು ಎಚ್ಚರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

8 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

9 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

13 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

15 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

15 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

16 hours ago