ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.
GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.
ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.
ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.
ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು.
ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ
ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.
ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ
ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.
ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…