ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ.
ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ ವಿದ್ಯಾರ್ಥಿನಿಯು ನಮಮ್ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಹಾಗಾಗಿ ಸರಿಯಾದ ಸಮಯಕ್ಕೆ ಪಾಠ-ಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಹೊಸ ಶಿಕ್ಷಕರನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾಳೆ. ಇದರ ಜೊತೆಗೆ ಶಾಲೆಯ ಕೊಠಡಿ ಕೂಡ ಶಿಥಿಲಗೊಂಡಿದೆ. ಆದ್ದರಿಂದ ನಾವು ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಿಥಿಲಗೊಂಡಿರುವ ಕಟ್ಟಡವನ್ನು ಸರಿಪಡಿಸಿ ಎಂದು ಶಾಸಕರ ಗಮನಕ್ಕೆ ತಂದರು. ಈ ವೇಳೆ ಶಾಸಕ ರವಿಕುಮಾರ್ ಅವರು ಕ್ಷಣದಲ್ಲೇ ಶಾಸಕರ ಅನುದಾನದಲ್ಲಿ 5 ಲಕ್ಷ ಅನುದಾನವನ್ನು ಮಂಜೂರು ಮಾಡಿ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…