ಮಂಡ್ಯ

ಆಸ್ಪತ್ರೆಗೆ ಬರುವ ಮುನ್ನವೇ ಬಾಲಕಿ ಸಾವು : ಕುಪಿತಗೊಂಡ ಗುಂಪೊಂದು ವೈದ್ಯರ ಮೇಲೆ ಹಲ್ಲೆಗೆ ಯತ್ನ ; ದೂರು ದಾಖಲು

ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ.

ಮೂಲತಃ ಕೊಳ್ಳೇಗಾಲ ಪಟ್ಟಣದ ಲೇ.ಜಕಾಉಲ್ಲಾ ಎಂಬುವವರ ಪುತ್ರಿ ೧೭ ವರ್ಷ ಬಾಲಕಿ ಮೃತಪಟ್ಟು ದುರೈವಿಯಾಗಿದ್ದು, ಕೆಲ ದಿನಗಳ ಹಿಂದೆ ಹಲಗೂರಿನ ತನ್ನ ಅಜ್ಜಿ ಮನೆಗೆ ಬಂದಿದ್ದ ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತು. ಬಾಲಕಿಗೆ ಬುಧವಾರ ಹಲಗೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ತೀವ್ರವಾಗಿ ಅಸ್ವಸ್ಥತಗೊಂಡಿದ್ದ ಬಾಲಕಿಯನ್ನು ಗುರುವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬರುವ ಮುನ್ನ ಬಾಲಕಿ ಮೃತಪಟ್ಟಿದ್ದಳು ಎನ್ನಲಾಗಿದೆ.

ಬಾಲಕಿಯ ಬಾಯಲ್ಲಿ ನೊರೆ ಬರುತ್ತಿದ್ದನ್ನು ಗಮನಿಸಿದ ಆಸ್ಪತ್ರೆಯ ಕರ್ತವ್ತನಿರತ ಡಾ.ಮುರುಳಿ ಅವರು ಪರೀಕ್ಷೆ ನಡೆಸಿದಾಗ ಆಕೆ ಬರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಾರೆ. ಇದರಿಂದ ಕುಪಿತರಾದ ಮೃತ ಯುವತಿಯ ಕೆಲ ಸಂಬಂಧಿಕರು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಹಲ್ಲೆಗೆ ಯತ್ನ ನಡೆಸಿ ತುರ್ತು ಚಿಕಿತ್ಸಾ ಘಟಕದ ಕಿಟಕಿಯ ಗಾಜುಗಳನ್ನು ಹೊಡೆದು ಹಾಕಿ ಔಷಧಿಗಳನ್ನು ನಾಶ ಪಡಿಸಿ ದಾಳಿ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಅಕ್ರೊಶಕ್ಕೆ ಕಾರಣವಾಗಿದೆ.

ಘಟನೆಯಿಂದ ಭಯಬೀತರಾದ ವೈದ್ಯರು ಹಾಗೂ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರಿಂದ ಆಸ್ಪತ್ರೆಯ ಆವರಣದಲ್ಲಿ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಸಿಪಿಐ ಬಿ.ಜಿ.ಮಹೇಶ್ ಪರಿಸ್ಥಿತಿಯನ್ನು ತಿಳಿಗೊಳಿಸಿ ಹೆಚ್ಚಿನ ಭದ್ರತೆ ಕಲ್ಪಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ವೈದ್ಯರ ಮೇಲಿನ ಹಲ್ಲೆಗೆ ಯತ್ನ ಮತ್ತು ಆಸ್ಪತ್ರೆಯಲ್ಲಿನ ದಾಂಧಲೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೈದ್ಯರ ಮೇಲೆ ಹಲ್ಲಗೆ ಖಂಡನೆ:

ಅಸ್ಪತ್ರೆಗೆ ಬಂಧ ಬಾಲಕಿಗೆ ತುರ್ತಾಗಿ ಸ್ಪಂದಿಸಿ,ಏನಾಗಿದೆ ಎಂದು ಪೋಷಕರ ಬಳಿ ಕೇಳುತ್ತಿರುವಾಗಲೇ ಈ ರೀತಿ ಏಕಾಏಕಿ ವೈದಯರ ಮೇಲೆ ಹ್ಲಲೆಗೆ ಪ್ರಯತ್ನ ನಡೆಸಿರುವುದು ಖಂಡನೀಯ, ಮಾನವೀಯತೆಯುಳ್ಳ ವೈದ್ಯರ ಮೇಲೆ ಈ ರೀತಿ ಹಲ್ಲೆ ಮಾಡಿದರೆ ಯಾರು ತಾನೆ ಪ್ರಮಾಣಿಕ ಸೇವೆ ನೀಡಲು ಮುಂದೆ ಬರುತ್ತಾರೆ ಎಂದು ಸಾರ್ವಜನಿಕರು ಹಲ್ಲೆ ನಡೆಸಲು ಪ್ರಯತ್ನ ಹಾಗೂ ಧಾಂಧಲೆ ನಡೆಸಿದ ವ್ಯಕ್ತಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಅಸ್ಥಿ ಅಸ್ಪತ್ರೆ ಅದರ ಗಾಜುಗಳನ್ನು ಹೊಡೆದು ಹಾಕಿರುವುದು ಖಂಡನೀಯ ಕೂಡಲೇ ಪೋಲಿಸರು ದಾಂಧಲೆ ನಡೆಸಿ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

12 mins ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

1 hour ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

2 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

3 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

3 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

4 hours ago