Mysore
20
few clouds

Social Media

ಶನಿವಾರ, 24 ಜನವರಿ 2026
Light
Dark

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶ್ರೀ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ ಪೋಲು ಮಾಡುತ್ತಿದ್ದಾರೆ. ರಾಜ್ಯಪಾಲರು ಭಾಷಣ ಓದದಿರುವ ಅಥವಾ ಮೊಟಕುಗೊಳಿಸಿರುವ ಘಟನೆ ಇದೇ ಮೊದಲ ಬಾರಿ ನಡೆದಿದ್ದು ಅಲ್ಲ. ಜೆ.ಎಚ್.ಪಟೇಲರು ಸಿಎಂ ಆಗಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಅಂದಿನ ಸಂದರ್ಭವನ್ನು ನೆನಪು ಮಾಡಿಕೊಳ್ಳಬೇಕು. ಈಗ ನೋಡಿದರೆ ಅನಗತ್ಯವಾಗಿ ವಿಧಾನಸಭೆ ಕಲಾಪದಲ್ಲಿ ಸಂಘರ್ಷ ನಡೆಯುತ್ತಿದೆ. ಈ ಸಂಘರ್ಷಗಳಿಂದ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯೇ ಎಂದು ಪ್ರಶ್ನಿಸಿದರು.

ಮನ್ರೇಗಾ ವಿಷಯ ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ನಿಂದಿಸುವುದು ರಾಜ್ಯ ಸರ್ಕಾರದ ಉದ್ದೇಶ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆದಿದ್ದಾರೆ. ಪದೇ ಪದೇ ದಲಿತರ ಹೆಸರು ಬಳಸಿಕೊಂಡು ತಮ್ಮ ಸ್ಥಾನಮಾನ ಗಟ್ಟಿಗೊಳಿಸುವ ಪ್ರಯತ್ನದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಾರೆ. ಇದು ದಲಿತರ ಉದ್ಧಾರವೇ? ಎಂದು ಕಿಡಿಕಾರಿದರು.

 

 

Tags:
error: Content is protected !!