Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ.

ಡಿಸೆಂಬರ್.‌20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ, ಜಾನಪದ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿರುವ ಗೊ.ರು.ಚನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯವರು.

ಇವರು ಹಿರಿಯ ಜಾನಪದ ತಜ್ಞರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಕ್ರಿಯಾಶೀಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರು ಸಂಪಾದಿಸಿದ ʼಕರ್ನಾಟಕ ಜಾನಪದ ಕಲೆಗಳುʼ ಇಂದಿಗೂ ಮಾದರಿ ಕೃತಿಯಾಗಿದೆ.

ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೋ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು ಗೊ.ರು.ಚನ್ನಬಸಪ್ಪನವರ ಬರಹಗಳಾಗಿವೆ.

 

Tags: