ಮಂಡ್ಯ

ನಿತ್ಯ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ : ಎನ್ ಯತೀಶ್

ಮಂಡ್ಯ: ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರಿಂದ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ತಿಳಿಸಿದರು.

ಅವರು ಇಂದು(ಜೂ.19) ಮಂಡ್ಯ ನಗರದ ಪೊಲೀಸ್ ಪೆರೆಡ್ ಮೈದಾನದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ  ಸಂಬಂಧ ಇಂದು ಪೊಲೀಸ್ ಇಲಾಖೆಯ ಪೆರೆಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವದಲ್ಲಿ ಸುಮಾರು 300 ಜನ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸ ಮಾಡಿದ್ದು ಬಹಳ ಖುಷಿಯಾಯಿತು ಇದೇ ರೀತಿ ಪ್ರತಿದಿನ ಕೂಡ ಯೋಗಾಭ್ಯಾಸವನ್ನು ಮಾಡಿ ಎಂದು ಸಲಹೆ ನೀಡಿದರು.

ಆರೋಗ್ಯದ ಕಡೆಗೆ ಹೆಚ್ಚಿನ ಒಲವು ಕೊಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇನ್ನೂ ಹೆಚ್ಚಿನ ಸಾರ್ವಜನಿಕರು ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಹೇಳಿದರು.

ಮನುಷ್ಯನಿಗೆ ನೀರು ಅತಿಮುಖ್ಯವಾದ ಅಂಶ:ಡಾ. ಸೀತಾಲಕ್ಷ್ಮಿ

ದಿನ ನಿತ್ಯ ಜೀವನದಲ್ಲಿ ಸುಮಾರು ಜನರು ನೀರನ್ನು ಬಹಳ ಕಮ್ಮಿ ಕುಡಿಯುತ್ತಾರೆ ಇದರಿಂದ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ, ನೀರು ಕಡಿಮೆ ಕುಡಿಯುವುದರಿಂದ ಕಿಡ್ನಿಯಲ್ಲಿ ಸ್ಟೋನ್ ತೊಂದರೆ, ಸುಸ್ತು, ಆಯಾಸ ಮತ್ತು ಚರ್ಮದ ತೊಂದರೆಗಳು ಉಂಟಾಗುತ್ತದೆ. ಆದ್ದರಿಂದ ಒಂದು ಹೊತ್ತು ಊಟ ಕಡಿಮೆ ಮಾಡಿದರು ಕೂಡ ನೀರು ಕುಡಿಯುವುದನ್ನು ಕಮ್ಮಿ ಮಾಡಬಾರದು ನೀರು ಆರೋಗ್ಯಕ್ಕೆ ಬಹಳ ಮುಖ್ಯ ಎಂದು ಹೇಳಿದರು.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರೆ ನಮ್ಮ ದಿನ ನಿತ್ಯ ಆಹಾರದ ಪದ್ದತಿಯಲ್ಲಿ ಹೆಚ್ಚಾಗಿ ನೀರು ಕುಡಿಯುವ ಅಭ್ಯಾಸ, ಹಸಿ ತರಕಾರಿ ಗಳು, ಹಣ್ಣು ಹಂಪಲು, ಮೊಳಕೆ ಕಟ್ಟಿದ ಕಾಳುಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದು ಹೇಳಿದರು.

ಮಾಂಸಹಾರ ಸೇವನೆ ಮಾಡುವುದು ತಪ್ಪಲ್ಲ ಆದರೆ ಪ್ರತಿದಿನ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಆದ್ದರಿಂದ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎ ಎಸ್‌.ಪಿ ತಿಮ್ಮಯ್ಯ, ಡಿ.ವೈ.ಎಸ್.ಪಿ ಗಂಗಾಧರ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

38 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

43 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

45 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

47 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

49 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

13 hours ago