ಮಂಡ್ಯ

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಆರಂಭಿಸಿದೆ.

ಸೆಸ್ಕ್ ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಪ್ರಾರಂಭಿಸಿರುವ ನೂತನ ಹಾಗೂ ಜಿಲ್ಲೆಯ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಸೆಸ್ಕ್ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್ ಹಾಗೂ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ.ಮುನಿಗೋಪಾಲ್ ರಾಜು ಅವರು ಗುರುವಾರ ಲೋಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ ಅವರು, ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ತಡೆಗಟ್ಟಲು ಹಾಗೂ ಇಂಧನದ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಇವಿ ವಾಹನಗಳ ಬಳಕೆ ಅತ್ಯಂತ ಸಹಕಾರಿಯಾಗಿದೆ. ಇದಕ್ಕಾಗಿ ಸೆಸ್ಕ್ ವತಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಮೂಲಕ ಹಸಿರು ಶಕ್ತಿಯ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಸಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್‌ ಮಾತನಾಡಿ, ಕೆಲವು ದಿನಗಳ ಹಿಂದಷ್ಟೇ ಮೈಸೂರಿನಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಇವಿ ಫಾಸ್ಟ್ ಚಾರ್ಜಿಂಗ್ ಹಬ್ ಪ್ರಾರಂಭಿಸಲಾಗಿತ್ತು. ಇದೀಗ ಮಂಡ್ಯ ನಗರದಲ್ಲಿ ಸಾರ್ವಜನಿಕರ ಬಳಕೆಗೆ ಮೊದಲ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭಿಸಿದ್ದು, ಇದರಿಂದ ಇವಿ ವಾಹನಗಳ ಬಳಕೆದಾರರಿಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಇತರೆ ಕಡೆಗಳಲ್ಲಿ ಹೆಚ್ಚಿನ ಇವಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿ, ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುವುದು ಎಂದರು.

ಇವಿ ಕೇಂದ್ರದ ವಿಶೇಷತೆಗಳು
ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಆರಂಭಿಸಿರುವ ಇವಿ ಫಾಸ್ಟ್ ಚಾರ್ಜಿಂಗ್ ಘಟಕದಲ್ಲಿ 3 ನಾಲ್ಕು ಚಕ್ರ ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಕೇಂದ್ರದಲ್ಲಿ ಪ್ರಸ್ತುತ 30 ಕೆವಿ ಡಿಸಿ ಚಾರ್ಜರ್ ಮತ್ತು 7.4 ಕೆವಿ ಎಸಿ ಚಾರ್ಜರ್‌ಗಳಿದ್ದು, ಭವಿಷ್ಯದಲ್ಲಿ ಇದನ್ನು 240 ಕೆವಿ ಸೂಪರ್ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬಹುದಾಗಿದೆ. ಸಾವರ್ಜನಿಕರು Instacharge ಆಪ್ ಬಳಸಿಕೊಂಡು ಈ ವಿದ್ಯುತ್ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರದಲ್ಲಿ ತಮ್ಮ ವಾಹನಗಳನ್ನು ಚಾರ್ಜ್ ಮಾಡಬಹುದು.

ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ.ದಿವಾಕರ್, ಮುಖ್ಯ ಇಂಜಿನಿಯರ್ ಮೃತ್ಯುಂಜಯ ಸೇರಿದಂತೆ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

17 mins ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

27 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

44 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

55 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago