ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ.
ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 95.00 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 19.139 ಟಿಎಂಸಿ
ಒಳ ಹರಿವು – 29,552 ಕ್ಯೂಸೆಕ್
ಹೊರ ಹರಿವು – 5,297 ಕ್ಯೂಸೆಕ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 123.081 ಟಿಎಂಸಿ
ಇಂದಿನ ಮಟ್ಟ – 62.534 ಟಿಎಂಸಿ
ಒಳ ಹರಿವು – 1,14,445 ಕ್ಯೂಸೆಕ್
ಹೊರ ಹರಿವು – 6,761 ಕ್ಯೂಸೆಕ್
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ – 1,633 ಅಡಿಗಳು
ಇಂದಿನ ಮಟ್ಟ – 1,602.84 ಅಡಿಗಳು
ಗರಿಷ್ಠ ಟಿಎಂಸಿ – 105.788 ಟಿಎಂಸಿ
ಇಂದಿನ ಟಿಎಂಸಿ – 25.417 ಟಿಎಂಸಿ
ಒಳ ಹರಿವು – 47,294 ಕ್ಯೂಸೆಕ್
ಹೊರ ಹರಿವು – 213 ಕ್ಯೂಸೆಕ್
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…