ಮಂಡ್ಯ

ಜೀತ ವಿಮುಕ್ತರಿಗೆ ಸರ್ಕಾರಿ ದಾಖಲೆ ; ವಿಶೇಷ ಅಭಿಯಾನ

ಮಂಡ್ಯ : ಸರ್ಕಾರದ ಸೌಲಭ್ಯ, ಸವಲತ್ತುಗಳು ಜೀತವಿಮುಕ್ತ ಕುಟುಂಬಗಳಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ 13 ಸರ್ಕಾರಿ ದಾಖಲೆಗಳನ್ನು ಒದಗಿಸಲು “ನನ್ನ ಗುರುತು” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ತಿಳಿಸಿದರು.

ಇಂದು(ಜು.20) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜೀತ ವಿಮುಕ್ತರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಜೀತವಿಮಕ್ತರ ಸಂಘಟನೆಗಳೊಂದಿಗೆ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿರುವ ಜೀತವಿಮುಕ್ತಗೊಂಡ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ಒಂದು ತಿಂಗಳೊಳಗಾಗಿ ವರದಿ ನೀಡಬೇಕು ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಜುಲೈ ಮಾಹೆಯಲ್ಲಿ ಸಭೆಯನ್ನು ನಡೆಸಿ ವಿಶೇಷ ಅಭಿಯಾನದ ದಿನಾಂಕವನ್ನು ತಿಳಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ ನಿವೇಶನ ಹಾಗೂ ವಸತಿ ರಹಿತರ ಪಟ್ಟಿಯನ್ನು ತಯಾರಿಸಿ ಹಾಗೂ ವಿಶೇಷ ಅಭಿಯಾನ ಕುರಿತು ಜೀತವಿಮುಕ್ತ ಕುಟುಂಬದವರಿಗೆ ಮಾಹಿತಿ ನೀಡಿ ಎಂದು ಹೇಳಿದರು.

ಜೀತವಿಮುಕ್ತರಿಗೆ ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲಿ ಪುನರ್ವಸತಿ ಕಲ್ಪಿಸಿಕೊಡಲು ಪ್ರಯತ್ನಿಸಿ ಮತ್ತು 13 ಸರ್ಕಾರಿ ದಾಖಲೆಗಳೊಂದಿಗೆ ಇ-ಆಸ್ತಿ ಖಾತೆಯನ್ನು ಸಹ ಕಲ್ಪಿಸಿಕೊಡಿ ಎಂದರು.

 

ವಿವಿಧ ಕೌಶಲ್ಯಗಳನ್ನು ಕೊಡಿಸಿ: ಜೀತ ಮಾಡುವುದು ಕಾನೂನು ಬಾಹಿರವಾಗಿದ್ದು, ವಂಶ ಪಾರಂಪರಿಕವಾಗಿ ಜೀತ ಮಾಡುತ್ತಿರುವುದು ಕಂಡು ಬಂದಲ್ಲಿ ಕ್ರಮಕೈಗೊಳ್ಳಿ ಹಾಗೂ ಜೀತವಿಮುಕ್ತ ಕುಟುಂಬದ ಮಕ್ಕಳು ಜೀವನ ರೂಪಿಸಿಕೊಳ್ಳಲು ವಿವಿಧ ಕೌಶಲ್ಯ ತರಬೇತಿಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜೀತವಿಮುಕ್ತ ಕುಟುಂಬದ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಈ ನಿಟ್ಟಿನಲ್ಲಿ ಕಂಪ್ಯೂಟರ್ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ಚಾಲ್ತಿಯಲ್ಲಿರುವ ಇನ್ನಿತರ ಕೌಶಲ್ಯಗಳನ್ನು ಗುರುತಿಸಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಿ ಎಂದರು.

ನನ್ನ ಗುರುತು ವಿಶೇಷ ಅಭಿಯಾನದಲ್ಲಿ ಒದಗಿಸಲಾಗುವ 13 ಸರ್ಕಾರಿ ದಾಖಲೆಗಳು

1.ಆಧಾರ್ ಕಾರ್ಡ್, 2.ಜನನ ಪ್ರಮಾಣ ಪತ್ರ, 3.ಜಾತಿ-ಆದಾಯ ಪ್ರಮಾಣ ಪತ್ರ, 4 ಇ -ಶ್ರಮ್ ಕಾರ್ಡ್ 5.ಪಡಿತರ ಚೀಟಿ, 6. ಮತದಾರರ ಗುರುತಿನ ಚೀಟಿ, 7.ಬ್ಯಾಂಕ್ ಖಾತೆ, 8.ಸಾಮಾಜಿಕ ಪಿಂಚಣಿ,9. ಪಿ.ಎಂ.ಜೆ.ಜೆ.ಬಿ.ವೈ, 10.ಪಿ. ಎಂ. ಎಸ್. ಬಿ. ವೈ, 11.ಯು.ಡಿ.ಐ. ಡಿ, 12. ನರೇಗಾ ಜಾಬ್ ಕಾರ್ಡ್, 13.ಅಭಾ ಕಾರ್ಡ್,

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜೀತವಿಮುಕ್ತ ಸಂಘಟನೆಗಳ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

14 hours ago