ಮಂಡ್ಯ

ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ :ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಸರ್ಕಾರದ ಸೇವೆಗಳು ಜನರಿಗೆ ಸಮರ್ಪಕವಾಗಿ ನಿಗದಿತ ಸಮಯಕ್ಕೆ ಜನರ ಮನೆ ಬಾಗಿಲಿಗೆ ದೊರೆಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಿ ಯೋಜನೆಗಳು ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮವನ್ನು ಹಮ್ನಿಕೊಳ್ಳಲಾಗಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದವರು ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಹೇಳಿದರು.

ಅವರು ಇಂದು(ಜೂ.13) ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೆನ್ನಾಳು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವು ನನ್ನ ಕನಸಿನ ಕೂಗು ಎಂದು ಹೇಳಿದರೆ ತಪ್ಪಾಗಲಾರದು ಏಕಂದರೆ ಜನರು ಸರ್ಕಾರಿ ಕಚೇರಿ ತಾಲ್ಲೂಕು ಪಂಚಾಯಿತಿ ಗಳಲ್ಲಿ ಅಲೆಯುತ್ತಿರುವುದನ್ನು ನಾನು ನೋಡಿದ್ದೇನೆ, ನನ್ನ ಕ್ಷೇತ್ರದ ಜನರು ಇನ್ನೂ ಮುಂದೆ ಯಾವುದೇ ಕಚೇರಿ ಗಳಿಗೆ ಅಲೆಯುವುದು ಬೇಡ ಎಂದು ಸ್ವತಃ ನಾನೇ ಗ್ರಾಮಸ್ಥರ ಬಳಿ ತೆರಳುತ್ತಿದ್ದೇನೆ ಎಂದರು.

ಕೆನ್ನಾಳು ಗ್ರಾಮದಲ್ಲಿ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ಎಂಬ ಒಂದು ಚಿಕ್ಕ ಪ್ರಯತ್ನವನ್ನು ಇಂದಿನಿಂದ 15 ದಿನಗಳ ವರೆಗೆ  ಹಮ್ಮಿಕೊಂಡಿದ್ದೇನೆ ಇದಕ್ಕೆ ಜನಗಳ ಸಹಕಾರ ಬಹಳ ಮುಖ್ಯ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹೇಳಿದರು.

ಗ್ರಾಮದ ಜನರು ತಾಲ್ಲೂಕು ಕಛೇರಿ ಗಳಿಗೆ ಅಲೆಯಬಾರದು ಕುಂದು ಕೊರತೆಗಳು, ಸಮಸ್ಯೆಗಳು ಇದ್ದಲ್ಲಿ ಇದೇ ಗ್ರಾಮದಲ್ಲಿ ಈ 15 ದಿನಗಳಲ್ಲಿ ಪರಿಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ದಿನನಿತ್ಯ ಜನರು ನಮ್ಮ ಹತ್ತಿರ ಬರುವದಾಗಲೀ ಅಥವಾ ಸರ್ಕಾರಿ ಅಧಿಕಾರಿಗಳ ಹತ್ತಿರ ಹೋಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾ ಅದೇ ನೋವಿನಲ್ಲಿ ಬಳಲುತ್ತಿದ್ದರು ಇದಕ್ಕೆ ಏನಾದರೂ ಪರಿಹಾರ ಹುಡುಕಬೇಕು ಎಂದು ಜಿಲ್ಲಾಧಿಕಾರಿಗಳ ಹತ್ತಿರ ಅನುಮತಿ ಪಡೆದು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇನೆ ಎಂದರು.

ಪ್ರತಿ ಮನೆಗಳಿಗೆ ಹಾಗೂ ಊರುಗಳಿಗೆ ಸಿಗುವಂತಹ ಸವಲತ್ತುಗಳನ್ನು ಪಟ್ಟಿ ಮಾಡಿಕೊಂಡು ಒದಗಿಸಬೇಕು, ಯಾರು ಕೂಡ ಸರ್ಕಾರದ ಯೋಜನೆಗಳಿಂದ ವಂಚಿತರಾಗಬಾರದು, ಈ ವಿನೂತನ ಕಾರ್ಯಕ್ರಮದಲ್ಲಿ ಪ್ರತಿ ದಿನ ಸಂಜೆ 4 ರಿಂದ 6 ಗಂಟೆವರೆಗೆ ಜನರಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದೇವೆ ಎಂದರು.

ಬಾಲ್ಯವಿವಾಹ, ಬಾಲ್ಯ ಕಾರ್ಮಿಕ ಪದ್ಧತಿ ಮುಂತಾದ ಸಾಮಾಜಿಕ ಪಿಡುಗನ್ನು ತೊಡೆದುಹಾಕಲು, ಕಸ ವಿಲೇವಾರಿ, ಹಣ ಉಳಿತಾಯ ಮುಂತಾದ ಸಾರ್ವಜನಿಕ ಉಪಯುಕ್ತ ಕೆಲಸಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಸಹ ಈ ಕಾರ್ಯಕ್ರಮದಲ್ಲಿ ನಡೆಸಲಾಗುವುದು ಎಂದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಂದೀಶ್, ತಹಶೀಲ್ದಾರ್ ಶ್ರೇಯಸ್, ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಗ್ರಾಮಾಡಳಿತ ಅಧಿಕಾರಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌…

5 mins ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…

5 mins ago

ಬಿಜೆಪಿಗೆ ಆತಂಕ ತಂದ ಶಾ ಅಂತರಾಳದ ಮಾತು

‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…

17 mins ago

ವೈಜ್ಞಾನಿಕ ಕಸ ವಿಲೇವಾರಿಗೆ ಜಾಗದ ಸಮಸ್ಯೆ

ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…

28 mins ago

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳು

ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…

53 mins ago

ಮರ ಕಡಿಯದೆಯೇ ಕಾಗದ ತಯಾರಿಸುವ ಪೇಪರ್‌ ಪವಾರ್‌

ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…

1 hour ago