ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಲಭಿಸಿದೆ.
ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಹಾಗೂ ತಾಮ್ರ ಬಳಸಿ 18 ಭುಜಗಳ ಸಿಂಹಾವರೂಢ ಪಂಚಲೋಹದ ವಿಗ್ರಹವಾಗಿದೆ. ಇದು ಸುಮಾರು 35 ಕೆ.ಜಿ. ಟನ್ ತೂಕವಿದ್ದು, ಗೌಡಗೆರೆ ಚಾಮುಂಡೇಶ್ವರಿಗೆ ಎತ್ತರದ ವಿಗ್ರಹ ಗರಿ ಸಿಕ್ಕಿದೆ.
ಇನ್ನೂ ಗೌಡಗೆರೆಯಲ್ಲಿ ಭಾನುವಾರ(ಜನವರಿ.26) ನಡೆದ ಕಾರ್ಯಕ್ರಮದಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮುಖ್ಯಸ್ಥ ಸಾಗರ್ ಅವರು ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ರಾಮಕೃಷ್ಣಪ್ಪ, ಬಾಬು, ಸಗಾಯಿರಾಜು, ಸಂಘಟಕ ಸಂಜೀವ ರೆಡ್ಡಿ ಹಾಗೂ ಮಾಗನೂರು ಗಂಗರಾಜು ಉಪಸ್ಥಿತರಿದ್ದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…