ಮಂಡ್ಯ

ಇತರೆ ರಾಜ್ಯಕ್ಕೆ ʼಗ್ಯಾರಂಟಿʼ ಪ್ರೇರಣೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ ಹಣವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳಸಲಾಗಿದೆ. ಈ ಯೋಜನೆಯಡಿ 5 ವರ್ಷದಲ್ಲಿ ಸುಮಾರು 3 ಲಕ್ಷ ಕೋಟಿ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಗುರಿ ಇದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿರು.

ನಾಗಮಂಗಲದ ಟಿ.ಬಿ.ಸರ್ಕಲ್ ಬಡಗೂಡಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಇತರೆ ರಾಜ್ಯಗಳು ಪ್ರಾರಂಭಿಸಲು ಚಿಂತನೆ ನಡೆಸಿವೆ. ನಾವು ಅವರಿಗೆ ಪ್ರೇರಣೆಯಾಗಿದ್ದೇವೆ ಎಂದರು.

ಜನಸ್ಪಂದನ ಕಾರ್ಯಕ್ರಮದ ಪ್ರಮುಖ ಉದ್ದೇಶವೇ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದಾಗಿದೆ. ಈ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದದಿಂದ ಸಾರ್ವಜನಿಕರಿಂದ ಅನೇಕ ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲಿಸಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ತಾಲ್ಲೂಕು ಇಲಾಖೆಗಿಂತಲೂ ಜಿಲ್ಲಾಡಳಿತದ ಜವಾಬ್ದಾರಿ ದೊಡ್ಡದು, ಜಿಲ್ಲಾಡಳಿತ ಹೆಚ್ಚು ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲ್ಲೂಕು ಆಡಳಿತದಲ್ಲಿ ಅನುಭವದ ಕೊರತೆಯಿಂದ ಕೆಲಸ ನಿಧಾನ ಗತಿಯಾಗಿರಬಹುದು. ಜಿಲ್ಲೆಯಲ್ಲಿ ಕೆಲಸ ನಿರ್ವಹಣೆಯ ಜತೆಗೆ ಸಾರ್ವಜನಿಕರು ಕೆಲಸ ನಿರ್ವಹಣೆಯಲ್ಲಿ ಸಮಾಧಾನವಾದರೆ ಸಂತೋಷವಾಗುತ್ತದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದಾಗ ಸಾರ್ವಜನಿಕರು ಸಹಕರಿಸಿ ಎಂದರು.

ಇದನ್ನು ಓದಿ: ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ರಾಜ ಮನೆತನಗಳ ಕಾಲದಿಂದಲೂ ಸಂಪೂರ್ಣವಾಗಿ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಕಾಲದಲ್ಲಿ ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸುವ ಆದಿಯಲ್ಲಿದ್ದೇವೆ. ಎರಡು ವರೆ ವರ್ಷದಿಂದ ತಾಲ್ಲೂಕಿನ ವಿವಿದೆಡೆ ಜನಸ್ಪಂದನ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಕೊಪ್ಪ ಹೋಬಳಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಸಮಸ್ಯೆಯನ್ನು ಸಹ ಪರಿಹರಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರದಿಂದ ಹಣ ದೊರೆಯದಿದ್ದರೂ ಜನರ ಪರವಾಗಿ ರಾಜ್ಯ ಸರಕಾರ ಆರ್ಥಿಕ ಪರಿಸ್ಥಿತಿ ಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಹಾಲಿನ ಪ್ರೋತ್ಸಹ ಧನ, ಬಡ್ಡಿ ರಹಿತ ಸಾಲ, ಕೃಷಿ ಇಲಾಖೆ ಸೌಲಭ್ಯ, ಶಿಕ್ಷಣ, ಮಕ್ಕಳು, ಸಮಾಜ ಕಲ್ಯಾಣ ಇಲಾಖೆ ಸೌಲಭ್ಯ. ಸಾರ್ವಜನಿಕರಿಗೆ ಸಬ್ಸಿಡಿ, ಬರಗಾಲದ ಸಮಯದಲ್ಲಿ ಪರಿಹಾರ, ಮಳೆ ಹಾನಿ ಪರಿಹಾರಗಳಿಗಾಗಿ ಕೇಂದ್ರ ಸರಕಾರದ ಅನುದಾನ ನಿರೀಕ್ಷಿಸದೆ ಸ್ವಂತ ಖಜಾನೆಯಿಂದ ಸವಲತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ 8600 ಸಾವಿರ ಕ್ಕೂ ಹೆಚ್ಚು ಪಹಣಿಗಳನ್ನು ತಿದ್ದುಪಡಿ ಮಾಡಲಾಗಿದ್ದು, ಎ.ಸಿ ನ್ಯಾಯಾಲಯದಲ್ಲಿ 1600 ಕ್ಕೂ ಹೆಚ್ಚು ಕೋರ್ಟ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನಾಗಮಂಗಲ ತಾಲ್ಲೂಕಿನಲ್ಲಿ ಸುಮಾರು 20 ಸಾವಿರ ಪೌತಿ ಖಾತೆ ಬದಲಾವಣೆ ಮಾಡಲಾಗಿದೆ. 2 ಲಕ್ಷದ 60 ಸಾವಿರ ಆಧಾರ್ ಸೀಡಿಂಗ್ ಮಾಡಲಾಗಿದೆ ಎಂದರು.

ನಾಗಮಂಗಲ ತಾಲ್ಲೂಕಿನಲ್ಲಿ 80 ಸಾವಿರ ಖಾತೆ ಬಾಕಿಯಿದ್ದು, ಮುಂದಿನ 06 ತಿಂಗಳಲ್ಲಿ ಹಂತ-ಹಂತವಾಗಿ ಗ್ರಾಮ ಮಟ್ಟದಲ್ಲಿ ಆಂದೋಲನ ನಡೆಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮುಜರಾಯಿ ದೇವಸ್ಥಾನದ ಅರ್ಚಕರಿಗೆ 06 ತಿಂಗಳಿಗೆ 36 ಸಾವಿರ ಪ್ರತಿ ತಿಂಗಳಿಗೆ ಆರು ಸಾವಿರ ರೂಗಳಂತೆ ನಾಗಮಂಗಲ ತಾಲ್ಲೂಕಿನಲ್ಲಿ ಒಟ್ಟು 506 ದೇವಸ್ಥಾನಗಳಿಗೆ 30 ಲಕ್ಷಕ್ಕೂ ಹೆಚ್ಚು ಹಣ ನೀಡಲಾಗುತ್ತಿದೆ. NRLM ವತಿಯಿಂದ ಮಹಿಳೆಯರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಒಟ್ಟು 1 ಲಕ್ಷ 7 ಸಾವಿರ ಸ. ನಂ ಪೌತಿ ಖಾತೆ. 2 ಸಾವಿರಕ್ಕೂ ಹೆಚ್ಚು ದರಖಾಸ್ತು ಪೋಡಿ. 20 ಸಾವಿರ ಪ್ರಕರಣಗಳನ್ನು ಡಿ.ಸಿ, ಎ.ಸಿ ಹಾಗೂ ತಹಸೀಲ್ದಾ‌ರ್ ರವರ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಲಾಗಿದೆ. 962 ಕೆರೆಗಳ ಅಳತೆ ಕಾರ್ಯಪೂರ್ಣಗೊಂಡಿದೆ. ರೆಕಾರ್ಡ್ ರೂಂ ನಲ್ಲಿ ಭೂ ಸುರಕ್ಷಾ ಯೋಜನೆಯಡಿ 1 ಕೋಟಿ 60 ಲಕ್ಷ ಪುಟಗಳ ಸ್ಕ್ಯಾನಿಂಗ್ ಮಾಡಲಾಗಿದೆ. 154 ಹೊಸ ಕಂದಾಯ ಗ್ರಾಮಗಳನ್ನು ರಚಿಸಲು ಕ್ರಮವಹಿಸಲಾಗಿದೆ. 59 ಸಾವಿರ ಸರ್ಕಾರಿ ಜಮೀನುಗಳ ಲ್ಯಾಂಡ್ ಬೀಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ: ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಕೃಷಿ ಇಲಾಖೆ ವತಿಯಿಂದ ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ,ಮಳೆಯಾಶ್ರಿತ ಪ್ರದೇಶ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ, ಕೃಷಿ ಭಾಗ್ಯ ಯೋಜನೆ, ರೈತರ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣಕ್ಕಾಗಿ ಒಟ್ಟು 1.22 ಕೋಟಿ ಸಹಾಯಧನ ನೀಡಲಾಗಿದೆ ಎಂದರು.

ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರು ಜನರನ್ನು ತೃಪ್ತಿ ಪಡಿಸಲಾಗುತ್ತಿಲ್ಲ. ನನ್ನಿಂದ ಸಾಧ್ಯವಾದಷ್ಟು ಸೇವೇ ಸಲ್ಲಿಸಲು ನಾನು ಸದಾಸಿದ್ದ ಜಿಲ್ಲೆಯಲ್ಲಿ ಇನ್ನಾ ಹೆಚ್ಚು ಬದಲಾವಣೆ ತರಲು ನಮ್ಮೊಂದಿಗೆ ಸಹಕರಿಸಿ ಹಾಗೂ ದಯಮಾಡಿ ಸವಲತ್ತುಗಳ ಸೌಲಭ್ಯ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ನಾಗಮಂಗಲ ತಹಸೀಲ್ದಾರ್ ಆದರ್ಶ್, ಪಾಂಡವಪುರ ಉಪವಿಭಾಗ ಅಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ, ನಗರಾಭಿವೃದ್ಧಿ ಕೋಶ ಜಂಟಿ ನಿರ್ದೇಶಕರಾದ ನರಸಿಂಹ ಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago