ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುವುದದು. ಕೊಪ್ಪದಲ್ಲಿ ನಾಡ ಕಚೇರಿ ನಿರ್ಮಾಣ, ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಾಣ, ಪ್ರಾಥಾಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಅಭಿವೃದ್ದಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕೊಪ್ಪ ಕೆರೆಯ ನಾಲೆಗಳ ನಿರ್ಮಾಣಕ್ಕೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ರೂ. ಹಣ ಬಿಡುಗಡೆಗೊಳಿಸಲಾಗುವುದು. ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ 2 ತಿಂಗಳಿಂದ ಹಣ ನೀಡಿರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ಆದಷ್ಟು ಬೇಗ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.
ವಿಶ್ವವಿದ್ಯಾಲಯಗಳ ವಿಲೀನ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುವಂತೆ ಯಾರು ಹೇಳಿಲ್ಲ. ಆದರೆ, ಶಿಕ್ಷಣ ತಜ್ಞರು ವಿಲೀನ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಮಾಡಲಿದೆ ಎಂದರು.
ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ತಾ.ಪಂ.ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…