ಮಂಡ್ಯ

ಅಯ್ಯಪ್ಪಸ್ವಾಮಿಗೆ ಹೋದರೆ ಹೊಟ್ಟೆ ತುಂಬದು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು ಮಾರಿಕೊಳ್ಳುವವರು ಭಿಕ್ಷುಕರಿಗೆ ಸಮಾನ. ಅದು ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾದುದು. ಮೌಢ್ಯಾಚರಣೆ ಬಿಡಬೇಕು. ಹೋಮ, ಹವನಗಳನ್ನು ಬಿಟ್ಟು ವೈಜ್ಞಾನಿಕವಾಗಿ ಯೋಚಿಸಬೇಕು. ಅಯ್ಯಪ್ಪಸ್ವಾಮಿಗೆ ಹೋದರೆ ಹೊಟ್ಟೆ ತುಂಬುವುದಿಲ್ಲ. ಹಸಿವು ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿ ಕುಟುಂಬಕ್ಕೆ ಮಾಸಿಕ ೪ ಸಾವಿರದಿಂದ ೫ ಸಾವಿರ ರೂ.ನೀಡುತ್ತಿದೆ ಎಂದರು.

ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪು ಸುಲ್ತಾನ್  : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ ಜನರಿಂದ ಆಯ್ಕೆಯಾಗುತ್ತಾನೆ. ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ಸಾಮಾನ್ಯ ವ್ಯಕ್ತಿಯನ್ನು ರಾಜನ ಸ್ಥಾನಕ್ಕೆ ಕೂರಿಸುವ ಶಕ್ತಿ ಇದೆ. ಇಲ್ಲಿ ಪ್ರತಿಯೊಬ್ಬ ಪ್ರಜೆಯೂ ಸಾರ್ವಭೌಮನಾಗಿದ್ದಾನೆ. ಟಿಪ್ಪು ಸುಲ್ತಾನ್ ಕೆಆರ್‌ಎಸ್ ಬಳಿ ಅಣೆಕಟ್ಟೆ ಕಟ್ಟಲು ಅಡಿಗಲ್ಲು ಹಾಕಿದ್ದ. ದಲಿತರಿಗೆ ಭೂಮಿ ಹಂಚಿಕೆ ಮಾಡಿದ್ದ. ದೇವದಾಸಿ ಪದ್ದತಿಯನ್ನು ನಿಷೇಽಸಿದ್ದ. ಆತನನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಪಟ್ಟಣದಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್ ಭವನಕ್ಕೆ ೬ ಕೋಟಿ ರೂ. ಅನುದಾನ ಬೇಕೆಂದು ಕೇಳಿದ್ದಾರೆ. ಸರ್ಕಾರ ೨ ಕೋಟಿ ರೂ.ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದ ಸಚಿವರು, ಮಂಡ್ಯ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿದೆ. ಏನೇನೂ ಅಭಿವೃದ್ಧಿ ಮಾಡದ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಎಂದು ಟೀಕಿಸಿದರು.

೫೦ ಲಕ್ಷ ರೂ. ಬಿಡುಗಡೆಯಾಗಿದೆ: ಶಾಸಕ ರಮೇಶ ಬಂಡಿಸಿದ್ದೇಗೌಡ :- ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ೬ ಕೋಟಿ ರೂ. ಅಂದಾಜು ವೆಚ್ಚದ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಸರ್ಕಾರ ೫೦ ಲಕ್ಷ ರೂ.ಬಿಡುಗಡೆಗೊಳಿಸಿದೆ. ಸಕಾಲಕ್ಕೆ ಅನುದಾನ ಕೊಡಿಸಿದರೆ ಒಂದು ವರ್ಷದಲ್ಲಿ ಈ ಭವನ ಉದ್ಘಾಟನೆಯಾಗಲಿದೆ. ಪಟ್ಟಣದ ಬಾಬು ಜಗಜೀವನರಾಂ ಭವನದ ಮುಂದುವರೆದ ಕಾಮಗಾರಿಗೆ ಇನ್ನೂ ೨ ಕೋಟಿ ರೂ. ಅನುದಾನದ ಅಗತ್ಯವಿದ್ದು, ಬಿಡುಗಡೆ ಮಾಡಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಸಚಿವರಲ್ಲಿ ಮನವಿ ಮಾಡಿದರು.

ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, ಒಳ ಮೀಸಲಾತಿ ಜಾರಿ ವಿಷಯದಲ್ಲಿ ಯಾರೂ ಆತಂಕ ಪಡಬಾರದು. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಅಂಬೇಡ್ಕರ್ ಭವನ ಜ್ಞಾನ ದಾಸೋಹ ಕೇಂದ್ರವಾಗಬೇಕು. ಅಂಬೇಡ್ಕರ್ ಅವರ ಆಶಯದಂತೆ ಶೋಷಿತರು ಸ್ವಾಭಿಮಾನದಿಂದ ಬದುಕು ನಡೆಸಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಸಿದ್ದಯ್ಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಚಾಮರಾಜನಗರದ ಬೋಧಿದತ್ತ ತೇರ ಮೈತ್ರಿ ಮಾತಾ, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಪುರಸಭೆ ಅಧ್ಯಕ್ಷ ಎಂ.ಎಲ್.ದಿನೇಶ್, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ವಕೀಲ ಎಂ.ಪುಟ್ಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಪ್ರಕಾಶ್, ಉಪ ವಿಭಾಗಾಽಕಾರಿ ಕೆ.ಆರ್.ಶ್ರೀನಿವಾಸ್, ತಹಸಿಲ್ದಾರ್ ಚೇತನಾ ಯಾದವ್, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಹಾಗೂ ದಲಿತ ಸಂಘರ್ಷ ಸಮಿತಿಯ ಮುಖಂಡರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago