Mysore
17
clear sky

Social Media

ಶುಕ್ರವಾರ, 23 ಜನವರಿ 2026
Light
Dark

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲು ಬೀದಿಗೆ ಬಂಧವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.

ಇನ್ನು ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲಿ ಮತ್ತೊಬ್ಬರು ಯಾರೂ ಇಲ್ಲ ಎಂದು ಹೇಳಿದರು.

Tags:
error: Content is protected !!