ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ.
ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಆಗಸ್ಟ್.11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಜಮೀನೊಂದರಲ್ಲಿ ಭತ್ತ ನಾಟಿ ಮಾಡಲಿದ್ದಾರೆ.
ಎಚ್‌ಡಿಕೆ ಭತ್ತ ನಾಟಿ ಮಾಡಲಿರುವ ಹಿನ್ನೆಲೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ಅವರು ಸೀತಾಪುರ ಜಮೀನಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಆಗಸ್ಟ್.11ಕ್ಕೆ ಮಂಡ್ಯಗೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮೊದಲಿಗೆ ಕಾವೇರಿ ನದಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಬಳಿಕ ಸೀತಾಪುರಕ್ಕೆ ತೆರಳಿ ಭತ್ತ ನಾಟಿ ಮಾಡಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಇನ್ನೂ ಕಳೆದ 2018ರಲ್ಲಿ ಸಿಎಂ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದರು. ಇದೀಗ ಕೇಂದ್ರ ಸಚಿವರಾದ ಬಳಿಕ ಮತ್ತೆ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದು, ರೈತ ನಾಯಕ ಎಂಬುದನ್ನು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದ್ದಾರೆ.