Mysore
22
light rain

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ ಬಡಾವಣೆಯ ಹೆಸರಿನಲ್ಲಿ ಕೆರೆ, ಕಾಲುವೆಗಳನ್ನು ಮುಚ್ಚಿದ್ದಾರೆ. ಅಲ್ಲದೇ, ರಾಜರು ನಿರ್ಮಿಸಿದ್ದ ರಾಜ ಕಾಲುವೆಗಳನ್ನೂ ಸಹ ಉಳಿಸಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಪ್ರಸ್ತುತ ದಿನಗಳಲ್ಲಿ ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಕಷ್ಟ ಪಡುವಂತಾಗಿದೆ. ನನ್ನ ಬಗ್ಗೆ ಮಾತನಾಡುವವರು ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳಬೇಕು ಎಂದು ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

 

Tags:
error: Content is protected !!