Mysore
28
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

hdk

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಕೂಡಲೇ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಜನಾಭಿಪ್ರಾಯ ಪರಿಗಣಿಸದೆ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ.

ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರು ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳನ್ನು ಆಲಿಸಿದ್ದೇನೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸುನಂದಾ ಜಯರಾಮ್ ಅವರು ತಮಗೆ ನೀಡಿದ್ದ ಮನವಿ ಪತ್ರವನ್ನು ಲಗತ್ತಿಸಿದ್ದಾರೆ.

ಯಾವುದೇ ಕಾರಣಕ್ಕೂ ಮದ್ದೂರು ನಗರಸಭೆ ವ್ಯಾಪ್ತಿಗೆ ಈ ಗ್ರಾಮಗಳನ್ನು ಸೇರಿಸಬಾರದು. ಕೂಡಲೇ ಈ ಜನವಿರೋಧಿ ನಿರ್ಧಾರವನ್ನು ಹಿಂಪಡೆಯಬೇಕೆಂದು ಒಕ್ಕೂರಲ ಒತ್ತಾಯ ಮಾಡಿರುತ್ತಾರೆ. ಸ್ಥಳೀಯರ ಮನವಿಗೆ ಮನ್ನಣೆ ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ. ಅಲ್ಲದೆ, ಜನತೆಯ ನಿರ್ಧಾರಕ್ಕೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದು ಸರಿಯಲ್ಲ ಎಂದು ಸಚಿವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

Tags:
error: Content is protected !!