ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.
ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್ ಹಾಕಿ ಅಲಂಕಾರ ಮಾಡಲಾಗಿದೆ.
ಈ ಸಂಕೀರ್ತನಾ ಯಾತ್ರೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.
ಇನನು ಪಟ್ಟಣದ ವಿವಾದಿತ ಜಾಮಿಯಾ ಮಸೀದಿ ಮೇಲೆ ಮಾಲಾಧಾರಿಗಳು ಕಣ್ಣಿದ್ದು, ವಿವಾದಿತ ಮಸೀದಿ ಜಾಗ ಮೂಡಲ ಬಾಗಿಲು ಆಂಜನೇಯನ ಮೂಲ ದೇಗುಲ ಸ್ಥಾನ ಅನ್ನೋದು ಹನುಮ ಭಕ್ತರ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಎರಡು ದಶಕಗಳಿಂದ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ನಡೆಸಲಾಗುತ್ತಿದೆ.
ಗಂಜಾಂನ ಹನುಮ ದೇವಾಲಯದಿಂದ ರಂಗನಾಥ ದೇಗುಲದವರೆಗೂ ಈ ಸಂಕೀರ್ತನಾ ಯಾತ್ರೆ ನಡೆಯಲಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಂಕೀರ್ತನಾ ಯಾತ್ರೆಗೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪೊಲೀಸ್ ಇಲಾಖೆಯು ಸಹ ಹನುಮ ಮಾಲಾಧಾರಿಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…