ಮಂಡ್ಯ: ಬೈಕ್ ಸ್ಕಿಡ್ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಈ ಅವಘಡ ಸಂಭವಿಸಿದೆ.
ಒಂದೇ ಬೈಕ್‌ನಲ್ಲಿ ಮೂವರು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ನಿಮಿಷಾಂಬಾ ದೇವಸ್ಥಾನದಿಂದ ಆರಂಭವಾದ ಯಾತ್ರೆ ಜಾಮೀಯಾ ಮಸೀದಿ ಮುಂಭಾಗದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ನಡೆಯಲಿದೆ. ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿ ಮಯವಾಗಿದ್ದು ಎಲ್ಲೆಲ್ಲೂ ಹನುಮಧ್ವಜ ರಾರಾಜಿಸುತ್ತಿದೆ.
ಆದರೆ ಈ ಸಂಭ್ರಮದ ವೇಳೆ ಈ ಘಟನೆ ನಡೆದಿರುವುದು ಹನುಮ ಮಾಲಾಧಾರಿಗಳಿಗೆ ಕೊಂಚ ಬೇಸರ ತರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.





