ಮಂಡ್ಯ

ಎಚ್‌.ಡಿ ಕುಮಾರಸ್ವಾಮಿ ದಂಪತಿ ಕೋಟ್ಯಾಂತರ ರೂಪಾಯಿ ಆಸ್ತಿಗೆ ಅಧಿಪತಿ!

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್‌ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ.

ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕಳೆದ ವರ್ಷಕ್ಕಿಂತ ಎಚ್‌ಡಿ ಕುಮಾರಸ್ವಾಮಿ ಆಸ್ತಿ ಮೌಲ್ಯ 50.7 ಕೋಟಿ ರೂ. ಹೆಚ್ಚಳವಾಗಿದೆ.

ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್​ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿ ಬಳಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಇವೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.

ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.

ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

4 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

5 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

5 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

5 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

6 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

6 hours ago