ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ.
ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕಳೆದ ವರ್ಷಕ್ಕಿಂತ ಎಚ್‌ಡಿ ಕುಮಾರಸ್ವಾಮಿ ಆಸ್ತಿ ಮೌಲ್ಯ 50.7 ಕೋಟಿ ರೂ. ಹೆಚ್ಚಳವಾಗಿದೆ.
ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್‌ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿ ಬಳಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಇವೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.
ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.
ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…