Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಎಚ್.ಡಿ.ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ : ಶಾಸಕ ಕದಲೂರು ಉದಯ್

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು.

ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ ಅಂತ್ಯಕ್ಕೆ ಸರ್ಕಾರ ಪತನವಾಗಲಿದೆ ಎಂಬುದು ಸರಿಯಲ್ಲ ಎಂದರು.

ಎಚ್ ಡಿ ಕುಮಾರಸ್ವಾಮಿ ರಾಜಕೀಯ ನಿರುದ್ಯೋಗಿ, ಈಗಾಗಲೇ ಅಧಿಕಾರ ಕಳೆದುಕೊಂಡು ಮೂಲೆಗುಂಪಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿದು ಹೋಗಲಿದ್ದಾರೆ,

ಮಾಜಿ ಸಚಿವ ಸಿ. ಪಿ.ಯೋಗೇಶ್ವರ್ ಸೂಕ್ತ ಸಮಯದಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಳ್ಳದೆ ಸೋತು ರಾಜಕೀಯ ನಿರುದ್ಯೋಗಿಯಾಗಿದ್ದಾರೆ ಎಂದು ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಕಾವೇರಿ ವಿಚಾರದಲ್ಲಿ ಆದೇಶಗಳು ತಮಿಳುನಾಡಿನ ಪರ ಬರುತ್ತಿವೆ, ಇದರಿಂದ ರಾಜ್ಯ ಸರ್ಕಾರ ಸುಮ್ಮನೆ ಕೂರುವುದಿಲ್ಲ ಈಗಾಗಲೇ ಹಿರಿಯ ಕಾನೂನು ಸಲಹೆಗಾರರ ಬಳಿ ಚರ್ಚೆ ಮಾಡಲಾಗಿದೆ, ಜಿಲ್ಲೆಯ ರೈತರು, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!