ಮಂಡ್ಯ

ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂದ ಯತ್ನಾಳ್‌ಗೆ ಉತ್ತರ ಕೊಟ್ಟ ಎಚ್‌ಡಿಕೆ

ಮಂಡ್ಯ: ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಇಂದು ( ಅಕ್ಟೋಬರ್‌ 19 ) ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ ಎಂದು ಹೇಳಿದರು.

ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದ್ದೇನೇ ಹೊರತು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇನೆ ಎಂದು ಹೇಳಿಲ್ಲ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ. ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ, ಯಾರಾದರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ, ಅದರ ಬಗ್ಗೆ ಯಾರಿಗೂ ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಇಂದು ಸಂಜೆ ಚರ್ಚೆ

ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವರು ಹೇಳಿದರು. ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

32 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago