ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ ಎಂದು ಟಾಂಗ್ ನೀಡಿದರು.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ, ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟರು.
ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಿಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…