ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕಸ ಎತ್ತಲೂ ಬ್ಲಾಕ್‌ಲೀಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. ಆದರೆ, ಮೂವತ್ತು ವರ್ಷಕ್ಕೆ ನಾವು ನೀವು ಬದುಕಿರಲ್ಲ ಎಂದಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಎಸ್‌ಸಿ, ಎಸ್‌ಟಿ ಹಣ ಲೂಟಿ ಹೊಡೆದು ರಾಜಾರೋಷವಾಗಿ ಓಡಾಟ ನಡೆಸಿದ್ದಾರೆ. ಅಂತಹ ಭಂಡತನದ ರಾಜಕಾರಣ ನಾನು ಮಾಡಲ್ಲ ಎಂದು ಚಲುವರಾಯಸ್ವಾಮಿ ವಿರುದ್ಧ ಹೆಚ್‌ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಿರ್ನಾಮ ಮಾಡಿದ್ದೇವೆ ಎಂಬ ನಿಮ್ಮ ಅಹಂಕಾರದ ಮಾತುಗಳು, ನಾನು ಲೋಕಸಭೆಗೆ ನಿಲ್ಲುವಂತೆ ಮಾಡಿತು. ನನ್ನ ಬಗ್ಗೆ ಏನು ಬೇಕಾದರೂ ಮಾತನಾಡಿ, ಆದರೆ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಕಿಡಿಕಾರಿದರು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…