ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನೂ ನಾವು ಉಳಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ನಗರದ ಮೈಶುಗರ್ ಪ್ರೌಢಶಾಲೆಯ ಮೈದಾನದಲ್ಲಿ ಶನಿವಾರ ನಡೆದ ಮೈಶುಗರ್ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಚ್‌ಎಂಟಿ ಉಳಿಸುವ ಪ್ರಯತ್ನಕ್ಕೂ ಕೈ ಹಾಕಿದ್ದೇವೆ. ಅದಕ್ಕೆ ರಾಜ್ಯ ಸರ್ಕಾರ ನಾನಾ ರೀತಿಯಲ್ಲಿ ಅಡ್ಡಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಶುಗರ್ ಶಾಲೆ ಕಾಯಕಲ್ಪಕ್ಕೆ ನೀಲನಕ್ಷೆ ಸಿದ್ಧಪಡಿಸಿ
ಮೈಶುಗರ್ ಶಾಲೆ ಕಾಯಲ್ಪಕ್ಕೆ ನೆರವು ನೀಡಲು ಸದಾ ಸಿದ್ಧನಿದ್ದೇನೆ. ಈ ಶಾಲೆಯಲ್ಲಿ ಮೂವತ್ತು ಮಕ್ಕಳು ಓದುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಎಸ್‌ಎಸ್‌ಎಲ್‌ಸಿ ಜತೆಗೆ ಪಿಯುಸಿ ಬೋಧನೆಗೆ ಅರ್ಜಿ ಹಾಕಿಕೊಳ್ಳಿ. ಅದಕ್ಕೆ ಏನೇನು ಆಗಬೇಕೋ ಅದನ್ನು ನಾನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.
ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಏನೇನು ಮಾಡಬೇಕು ಎನ್ನುಬ ಬಗ್ಗೆ ಒಂದು ನೀಲನಕ್ಷೆ ಸಿದ್ಧ ಮಾಡಿ. ಅದಕ್ಕೆ ಅಗತ್ಯವಾದ ನೆರವು ನನ್ನಿಂದ ದೊರೆಯುತ್ತದೆ ಎಂದು ಹೇಳಿದರು.
ಎರಡು ಪ್ರಕರಣಗಳ ಬಗ್ಗೆ ವಿಷಾದ ವಾಹನ ತಪಾಸಣೆ ವೇಳೆ ಸಂಚಾರ ಪೊಲೀಸರ ಎಡವಟ್ಟಿನಿಂದ ಬಾಲಕಿ ಸಾವು ಹಾಗೂ ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಸಾವಿಗೆ ಪರಿಹಾರ ಕೊಡುವುದಾಗಿ ಹೇಳಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…