ಮಂಡ್ಯ

ನಾಲ್ವಡಿ, ಸರ್.ಎಂ.ವಿ. ಹೆಸರು ಉಳಿವಿಗೆ ಬದ್ದ : ಹೆಚ್‌ಡಿಕೆ

ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನೂ ನಾವು ಉಳಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ನಗರದ ಮೈಶುಗರ್ ಪ್ರೌಢಶಾಲೆಯ ಮೈದಾನದಲ್ಲಿ ಶನಿವಾರ ನಡೆದ ಮೈಶುಗರ್ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಚ್‌ಎಂಟಿ ಉಳಿಸುವ ಪ್ರಯತ್ನಕ್ಕೂ ಕೈ ಹಾಕಿದ್ದೇವೆ. ಅದಕ್ಕೆ ರಾಜ್ಯ ಸರ್ಕಾರ ನಾನಾ ರೀತಿಯಲ್ಲಿ ಅಡ್ಡಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಶುಗರ್ ಶಾಲೆ ಕಾಯಕಲ್ಪಕ್ಕೆ ನೀಲನಕ್ಷೆ ಸಿದ್ಧಪಡಿಸಿ
ಮೈಶುಗರ್ ಶಾಲೆ ಕಾಯಲ್ಪಕ್ಕೆ ನೆರವು ನೀಡಲು ಸದಾ ಸಿದ್ಧನಿದ್ದೇನೆ. ಈ ಶಾಲೆಯಲ್ಲಿ ಮೂವತ್ತು ಮಕ್ಕಳು ಓದುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಎಸ್‌ಎಸ್‌ಎಲ್‌ಸಿ ಜತೆಗೆ ಪಿಯುಸಿ ಬೋಧನೆಗೆ ಅರ್ಜಿ ಹಾಕಿಕೊಳ್ಳಿ. ಅದಕ್ಕೆ ಏನೇನು ಆಗಬೇಕೋ ಅದನ್ನು ನಾನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಏನೇನು ಮಾಡಬೇಕು ಎನ್ನುಬ ಬಗ್ಗೆ ಒಂದು ನೀಲನಕ್ಷೆ ಸಿದ್ಧ ಮಾಡಿ. ಅದಕ್ಕೆ ಅಗತ್ಯವಾದ ನೆರವು ನನ್ನಿಂದ ದೊರೆಯುತ್ತದೆ ಎಂದು ಹೇಳಿದರು.

ಎರಡು ಪ್ರಕರಣಗಳ ಬಗ್ಗೆ ವಿಷಾದ ವಾಹನ ತಪಾಸಣೆ ವೇಳೆ ಸಂಚಾರ ಪೊಲೀಸರ ಎಡವಟ್ಟಿನಿಂದ ಬಾಲಕಿ ಸಾವು ಹಾಗೂ ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಸಾವಿಗೆ ಪರಿಹಾರ ಕೊಡುವುದಾಗಿ ಹೇಳಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago