cheluvarayaswamy
ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳೋ, ವರ್ಷಕ್ಕೋ ಒಮ್ಮೆ ಬರುತ್ತಾರೆ. ಏನೋ ತೊಂದರೆಯಾಗಿದೆ ಎಂದು ತೋರಿಸಿಕೊಳ್ಳುತ್ತಾರೆ. ಮತ ಕೊಟ್ಟ ಕ್ಷೇತ್ರದ ಅಭಿವೃದ್ಧಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಬದ್ಧತೆ, ಇಚ್ಛಾಶಕ್ತಿ ಇಲ್ಲ. ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ ಎಂಬ ಹಳೇ ರಾಗವನ್ನು ಹಾಡಿ ಪಲಾಯನ ಮಾಡುತ್ತಿದ್ದಾರೆ. ಜನರು ಕೆಲಸ ಮಾಡುವವರನ್ನು ಬಿಟ್ಟು, ಅಂತಹವರನ್ನೇ ಇಷ್ಟಪಡುತ್ತಾರೆ. ಏನು ಮಾಡೋಕಾಗುತ್ತೆ ಎಂದು ಪ್ರಶ್ನಿಸಿದರು.
ಸಂಸದರ ಅನುದಾನ ಎಲ್ಲರಿಗೂ ಬಂದೇ ಬರುತ್ತದೆ. ಅದನ್ನೇ ದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುವುದು ದೊಡ್ಡಸ್ತಿಕೆಯಲ್ಲ. ವಿಶೇಷ ಅನುದಾನ ತಂದಿದ್ದರೆ ಅದನ್ನು ಸಾಧನೆ ಎನ್ನಬಹುದು. ಯಾವುದಾದರೊಂದು ಕಾರ್ಖಾನೆಯನ್ನೋ, ಕೈಗಾರಿಕೆಯನ್ನೋ ತಂದು ಉದ್ಯೋಗ ಸೃಷ್ಟಿಸಿರುವ ಬಗ್ಗೆ ಎಚ್‌ಡಿಕೆ ಪಟ್ಟಿ ಬಿಡುಗಡೆ ಮಾಡಲಿ. ಕೇಂದ್ರ ಸಚಿವರಾದವರು ಸಿಎಸ್‌ಆರ್ ಫಂಡ್ ತಂದಿದ್ದನ್ನು ಅವರ ಮಟ್ಟಕ್ಕೆ ಬಿಂಬಿಸಿಕೊಳ್ಳುವುದು ಯೋಗ್ಯತೆಯಲ್ಲ ಎಂದರು.
ಇದನ್ನು ಓದಿ: ಮಳವಳ್ಳಿ | 3 ಬಸ್‌ಗಳ ಡಿಕ್ಕಿ ; ಇಬ್ಬರ ಸಾವು, 75ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯದಲ್ಲಿ ಹಾದುಹೋಗಿರುವ ಬೆಂಗಳೂರು-ಮೈಸೂರು ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಕುಮಾರಸ್ವಾಮಿ ಅವರಿಂದ ಸಾಧ್ಯವಾಗುತ್ತಿಲ್ಲ. ಪ್ರಧಾನಿ ಬಳಿ ಕುಳಿತು ರಾಜ್ಯದ ಸಮಸ್ಯೆಗಳನ್ನು ವಿವರಿಸಿ ಬಗೆಹರಿಸಲು ಪ್ರಯತ್ನಿಸಬೇಕು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದಾರೆ? ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದಾದರೂ ಒಂದು ಪತ್ರ ಬರೆದಿದ್ದಾರಾ? ರಾಜ್ಯದ ಕೈಗಾರಿಕಾ ಸಚಿವರನ್ನು ಭೇಟಿಯಾಗಿದ್ದಾರಾ? ಎಂದು ಪ್ರಶ್ನೆಗಳ ಸುರಿಮಳೆಗರೆದರು.
ಆರ್‌ಎಸ್‌ಎಸ್ ಬಿಜೆಪಿ ಅಂಗ ಸಂಸ್ಥೆ
ಆರ್‌ಎಸ್‌ಎಸ್ ಪಥಸಂಚನದಲ್ಲಿ ಭಾಗಿಯಾದ ಸರ್ಕಾರಿ ಅಽಕಾರಿಗಳ ಅಮಾನತ್ತುಗೊಳಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಆರ್‌ಎಸ್‌ಎಸ್ ಪಥ ಸಂಚಲನ ಆ ಸಂಘಟನೆಯ ವೈಯಕ್ತಿಕ ವಿಚಾರ. ಅದು ಬಿಜೆಪಿ ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಅದರ ಕಾರ್ಯಚಟುವಟಿಕೆ ನಿಷೇಧ ಕುರಿತು ಸರ್ಕಾರದ ತೀರ್ಮಾನವೇ ಅಂತಿಮ ಎಂದಷ್ಟೇ ಹೇಳಿದರು.
೧೪ ಲಕ್ಷ ಹೆಕ್ಟೇರ್ ಬೆಳೆ ಹಾನಿ
ಈ ಬಾರಿ ಮಳೆಯಿಂದಾಗಿ ರಾಜ್ಯದಲ್ಲಿ ೧೪ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ೧೫ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಗದಿಪಡಿಸಿದ ಪರಿಹಾರಕ್ಕಿಂತ ೮೫೦೦ ರೂ. ಸಾವಿರ ಹೆಚ್ಚು ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…